alex Certify SHOCKING NEWS: ಕಾಲಿಂಗ್ ಬೆಲ್ ಸದ್ದು ಕೇಳಿ ಬಾಗಿಲು ತೆರೆದ ವಿದ್ಯಾರ್ಥಿನಿ; ಮನೆಗೆ ನುಗ್ಗಿದ ಕಿರಾತಕನಿಂದ ಲೈಂಗಿಕ ದೌರ್ಜನ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಕಾಲಿಂಗ್ ಬೆಲ್ ಸದ್ದು ಕೇಳಿ ಬಾಗಿಲು ತೆರೆದ ವಿದ್ಯಾರ್ಥಿನಿ; ಮನೆಗೆ ನುಗ್ಗಿದ ಕಿರಾತಕನಿಂದ ಲೈಂಗಿಕ ದೌರ್ಜನ್ಯ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಆತಂಕಕಾರಿ ಘಟನೆಯೊಂದು ನಡೆದಿದೆ. ಅಪರಿಚಿತ ವ್ಯಕ್ತಿಯೊಬ್ಬ ಮನೆಗೆ ನುಗ್ಗಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ಬೆಂಗಳೂರಿನ ಈಜಿಪುರದಲ್ಲಿ ನಡೆದಿದೆ.

ಮುಂಜಾನೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ಕಾಲಿಂಗ್ ಬೆಲ್ ಒತ್ತಿದ್ದಾನೆ. ಯಾರೋ ಬಂದರು ಎಂದು ವಿದ್ಯಾರ್ಥಿನಿ ಬಾಗಿಲು ತೆರೆದಿದ್ದಾಳೆ. ಏಕಾಏಕಿ ಒಳಗೆ ನುಗ್ಗಿದ ಕಿರಾತಕ ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿ ಲೈಂಗಿಕ ದೌರ್ಜನ್ಯವೆಸಗಿದ್ದಾನೆ.

ವಿದ್ಯಾರ್ಥಿನಿ ಕಿರುಚಾಟ ಕೇಳಿ ಅಕ್ಕಪಕ್ಕದ ಮನೆಯವರು ಬಂದು ನೋಡಿದ್ದಾರೆ. ಅಪರಿಚಿತ ವ್ಯಕ್ತಿಯನ್ನು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ವಿವೇಕ್ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿಯನ್ನು ಬಂಧಿಸಿರುವ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...