alex Certify SHOCKING NEWS: ಕಿರುಕುಳ ಆರೋಪ; ವಾಟ್ಸಾಪ್ ಸ್ಟೇಟಸ್ ಹಾಕಿ ಆತ್ಮಹತ್ಯೆಗೆ ಶರಣಾದ ಯುವಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಕಿರುಕುಳ ಆರೋಪ; ವಾಟ್ಸಾಪ್ ಸ್ಟೇಟಸ್ ಹಾಕಿ ಆತ್ಮಹತ್ಯೆಗೆ ಶರಣಾದ ಯುವಕ

ಹಾವೇರಿ: ಯುವತಿ ಮನೆಯವರು ಮದುವೆಯಾಗುವಂತೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಬನ್ನಿಹಟ್ಟಿಯಲ್ಲಿ ನಡೆದಿದೆ.

ವಾಟರ್ ಮೆನ್ ಆಗಿ ಕೆರ್ಲಸ ಮಾಡುತ್ತಿದ್ದ 20 ವರ್ಷದ ಯುವಕ ಪ್ರಸನ್ನ ಲಮಾಣಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಯುವತಿ ಪೋಷಕರು ಮದುವೆಯಾಗುವಂತೆ ತನಗೆ ಧಮ್ಕಿ ಹಾಕುತ್ತಿದ್ದಾರೆ. ಅಲ್ಲದೇ ಕಿರುಕುಳ ನೀಡುತ್ತಿದ್ದಾರೆ ಎಂದು ವಾಟ್ಸಾಪ್ ಸ್ಟೇಟಸ್ ಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಪ್ರಸನ್ನನಿಗೆ ಯುವತಿ ಮನೆಯವರು ಮಗಳನ್ನು ಮದುವೆಯಾಗಿ ಕರೆದುಕೊಂಡು ಹೋಗು ಇಲ್ಲವಾದರೆ ಜೀವಸಹಿತ ಬಿಡಲ್ಲ ಎಂದು ಬೆದರಿಕೆಯೊಡ್ಡಿದ್ದರು. ತನ್ನ ಸಾವಿಗೆ ಯುವತಿ ಹಾಗೂ ಆಕೆ ಮನೆಯವರೇ ಕಾರಣ ಎಂದು ಆರೋಪಿಸಿ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.

ಯುವತಿ ಸೇರಿದಂತೆ ಮೂವರ ವಿರುದ್ಧ ಹಿರೇಕೆರೂರು ಠಾಣೆಯಲ್ಲಿ ದೂರು ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...