ಬೆಂಗಳೂರು: ಕೆಲಸಕ್ಕಾಗಿ ಪ್ರಯತ್ನಿಸುತ್ತಿದ್ದ ಎಂಬಿಎ ವಿದ್ಯಾರ್ಥಿಯೊಬ್ಬ ಪಿಜಿಯಲ್ಲಿಯೇ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಡಾರ್ಜಿಲಿಂಗ್ ಮೂಲದ ಶಿಶಿರ್ ಗೊಡಾಲ್ (24) ಮೃತ ವಿದ್ಯಾರ್ಥಿ. ಚಾಲುಕ್ಯ ಲೇಔಟ್ ನ ಶ್ರೀ ಸಾಯಿ ಹೈಟೆಕ್ ಪಿಜಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಶಿಶಿರ್, ಮಾನ್ಯತಾ ಟೆಕ್ ಪಾರ್ಕ್ ನಲ್ಲಿ ಕೆಲಸಕ್ಕಾಗಿ ಪ್ರಯತ್ನಿಸಿದ್ದ. ಆತನ ಜತೆಯಲ್ಲಿದ್ದ ಸ್ನೇಹಿತನಿಗೆ ಅಲ್ಲಿ ಕೆಲಸ ಸಿಕ್ಕಿತ್ತು. ಆದರೆ ಶಿಶಿರ್ ಗೆ ಸಿಕ್ಕಿರಲಿಲ್ಲ. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗೋವಿಂದಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.