ಉಡುಪಿ: ರಿವಾಲ್ವರ್ ನಿಂದ ಗುಂಡು ಹಾರಿಸಿಕೊಂಡು ಖ್ಯಾತ ಉದ್ಯಮಿ, ಚಿನ್ಮಯಿ ಆಸ್ಪತ್ರೆ ಮಾಲೀಕ ಕಟ್ಟೆ ಭೋಜಣ್ಣ ಆತ್ಮಹತ್ಯೆಗೆ ಶರಣಾದ ಘಟನೆ ಕೋಟೇಶ್ವರದಲ್ಲಿ ನಡೆದಿದೆ.
80 ವರ್ಷದ ಕಟ್ಟೆ ಭೋಜಣ್ಣ ಹಲವಾರು ಹೋಟೆಲ್, ಚಿನ್ಮಯಿ ಆಸ್ಪತ್ರೆ ಮಾಲೀಕರಾಗಿದ್ದು, ಕುಂದಾಪುರ ಚಿನ್ಮಯಿ ಆಸ್ಪತ್ರೆ ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜನಪ್ರಿಯ ಆಸ್ಪತ್ರೆಯಾಗಿದೆ.
ಕೋಟೆಶ್ವರದ ಗಣೇಶ್ ಶೆಟ್ಟಿ ಎಂಬುವವರ ಮನೆಯ ಸಿಟೌಟ್ ನಲ್ಲಿ ರಿವಾಲ್ವರ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಜಮೀನು ಹಾಗೂ ಹಣದ ವ್ಯವಹಾರವೇ ಭೋಜಣ್ಣ ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ. ಕುಂದಾಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.