ಪೊಲೀಸ್ ಮುಖ್ಯ ಪೇದೆಯೊಬ್ಬರು ಠಾಣೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆದಿದೆ. 33 ವರ್ಷದ ರಾಹುಲ್ ತ್ಯಾಗಿ ಮೃತಪಟ್ಟ ಪೇದೆಯಾಗಿದ್ದಾರೆ.
ಸೋಮವಾರದಂದು ನವದೆಹಲಿಯ ಚಾಂದಿನಿ ಮಹಲ್ ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದ್ದು, ರಾಹುಲ್ ತ್ಯಾಗಿ ಅವರ ತಂದೆ ನಿರಂತರವಾಗಿ ಕರೆ ಮಾಡಿದರೂ ಸಹ ಅವರು ಸ್ವೀಕರಿಸಿರಲಿಲ್ಲ ಎಂದು ಹೇಳಲಾಗಿದೆ.
ಈ ಹಿನ್ನೆಲೆಯಲ್ಲಿ ಠಾಣೆಯ ಇತರೆ ಪೊಲೀಸರಿಗೆ ವಿಷಯ ತಿಳಿಸಿದ್ದು, ಅವರುಗಳು ಎಷ್ಟು ಬಡಿದರೂ ರಾಹುಲ್ ಬಾಗಿಲು ತೆಗೆದಿಲ್ಲ. ಈ ವೇಳೆ ಬಾಗಿಲು ಒಡೆದು ಒಳ ನುಗ್ಗಿದಾಗ ಬೆಡ್ ಶೀಟ್ ನಿಂದ ನೇಣು ಬಿಗಿದುಕೊಂಡಿರುವುದು ಕಂಡುಬಂದಿದೆ.
ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತಾದರೂ ಅಷ್ಟರಲ್ಲಾಗಲೇ ಮೃತಪಟ್ಟಿದ್ದರು ಎಂದು ಹೇಳಲಾಗಿದೆ. ಯಾವ ಕಾರಣಕ್ಕೆ ರಾಹುಲ್ ತ್ಯಾಗಿ ಈ ನಿರ್ಧಾರ ಕೈಗೊಂಡಿದ್ದಾರೆ ಎಂಬುದು ತನಿಖೆಯಿಂದ ತಿಳಿದು ಬರಬೇಕಿದೆ.