alex Certify SHOCKING NEWS: ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಉಪನ್ಯಾಸಕಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಉಪನ್ಯಾಸಕಿ

ಚಾಮರಾಜನಗರ: ಉಪನ್ಯಾಸಕಿಯೊಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರದ ಜೆ ಎಸ್ ಎಸ್ ಕಾಲೇಜಿನಲ್ಲಿ ನಡೆದಿದೆ.

26 ವರ್ಷದ ಚಂದನಾ ಆತ್ಮಹತ್ಯೆ ಮಾಡಿಕೊಂಡವರು. ಕಳೆದ 6 ತಿಂಗಳಿಂದ ಜೆ ಎಸ್ ಎಸ್ ಕಾಲೇಜು ಉಪನ್ಯಾಸಕಿಯಾಗಿ ಸೇವೆ ಸಲ್ಲಿಸುತ್ತಿದ್ದ ಚಂದನಾ, ತನ್ನ ಹುಟ್ಟುಹಬ್ಬದ ದಿನವೇ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಡೆತ್ ನೋಟ್ ಬರೆದಿಟ್ಟಿರುವ ಚಂದನಾ ತನ್ನ ಸಾವಿಗೆ ತಾನೇ ಕಾರಣ ಎಂದು ಉಲ್ಲೇಖಿಸಿದ್ದಾಳೆ. ಇಂದು ಬೆಳಿಗ್ಗೆ ಚಂದನಾ ತಂದೆ ಆಕೆಗೆ ಫೋನ್ ಮಾಡಿದಾಗ ಎಷ್ಟು ಹೊತ್ತಾದರೂ ಫೋನ್ ರಿಸೀವ್ ಮಾಡಿಲ್ಲ, ಕೆಲ ಸಮಯದ ಬಳಿಕ ಚಂದನಾ ಆತ್ಮಹತ್ಯೆಗೆ ಶರಣಾಗಿರುವ ವಿಷಯ ಗೊತ್ತಾಗಿದೆ ಎಂದು ಕುಟುಂಬದವರು ಕಣ್ಣೀರಿಟ್ಟಿದ್ದಾರೆ.

ಚಾಮರಾಜನಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...