alex Certify SHOCKING NEWS: ತಾಲೂಕು ಕಚೇರಿ ಕಟ್ಟಡದಿಂದಲೇ ಜಿಗಿದ ನೌಕರ; ಆತ್ಮಹತ್ಯೆಗೆ ಶರಣು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ತಾಲೂಕು ಕಚೇರಿ ಕಟ್ಟಡದಿಂದಲೇ ಜಿಗಿದ ನೌಕರ; ಆತ್ಮಹತ್ಯೆಗೆ ಶರಣು

ಮಂಡ್ಯ: ತಾಲೂಕು ಕಚೇರಿಗೆ ಆಗಮಿಸಿದ್ದ ನೌಕರನೊಬ್ಬ ಅದೇ ಕಚೇರಿಯ ಮೇಲಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನಲ್ಲಿ ನಡೆದಿದೆ.

ವೆಂಕಟೇಶ್ ಮೃತ ನೌಕರ. ಮಂಡ್ಯ ತಾಲೂಕು ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೆಂಕಟೇಶ್, ಕೆಲಸದ ನಿಮಿತ್ತ ಮದ್ದೂರು ತಾಲೂಕು ಕಚೇರಿಗೆ ಆಗಮಿಸಿದ್ದ. ಈ ವೇಳೆ ಇದ್ದಕ್ಕಿದ್ದಂತೆ ಕಚೇರಿಯ ಮೇಲ್ಭಾಗಕ್ಕೆ ತೆರಳಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಗಂಭೀರವಾಗಿ ಗಾಯಗೊಂಡಿದ್ದ ವೆಂಕಟೇಶ್ ರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮದ್ದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...