ಹಾಸನ: ಕಾರಿನಲ್ಲಿ ಕುಟುಂಬ ಸಮೇತ ಧರ್ಮಸ್ಥಳಕ್ಕೆ ತೆರಳುತ್ತಿದ್ದ ವೇಳೆ ಭೀಕರ ಅಪಘಾತಕ್ಕೀಡಾಗಿ ತಂದೆ-ಮಗ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಹಾಸನ ಜಿಲ್ಲೆಯ ಆಲೂರು ಬಳಿ ನಡೆದಿದೆ.
ತಮಿಳುನಾಡು ಮೂಲದ ಅಂಜನಪ್ಪ (40) ಹಾಗೂ ಮಗ ಕಾರ್ತಿಕ್ (17) ಮೃತ ದುರ್ದೈವಿಗಳು. ಎರಡು ಕಾರಿನಲ್ಲಿ 10 ಜನರು ಧರ್ಮಸ್ಥಳಕ್ಕೆ ಪ್ರಯಾಣಿಸಿದ್ದರು. ಆಲೂರು ತಾಲೂಕಿನ ಆಲೂರು-ಈಶ್ವರಹಳ್ಳಿ ಕೂಡಿಗೆ ಬಳಿ ಟ್ಯಾಂಕರ್ ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ತಂದೆ-ಮಗ ಸ್ಥಳದಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ವ್ಯಕ್ತಿ ರಾಮಚಂದ್ರ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ.
ಆಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.