alex Certify SHOCKING NEWS: ಧರ್ಮಸ್ಥಕ್ಕೆ ತೆರಳುತ್ತಿದ್ದ ಕುಟುಂಬ; ಭೀಕರ ರಸ್ತೆ ಅಪಘಾತ; ತಂದೆ-ಮಗ ಸ್ಥಳದಲ್ಲೇ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಧರ್ಮಸ್ಥಕ್ಕೆ ತೆರಳುತ್ತಿದ್ದ ಕುಟುಂಬ; ಭೀಕರ ರಸ್ತೆ ಅಪಘಾತ; ತಂದೆ-ಮಗ ಸ್ಥಳದಲ್ಲೇ ದುರ್ಮರಣ

ಹಾಸನ: ಕಾರಿನಲ್ಲಿ ಕುಟುಂಬ ಸಮೇತ ಧರ್ಮಸ್ಥಳಕ್ಕೆ ತೆರಳುತ್ತಿದ್ದ ವೇಳೆ ಭೀಕರ ಅಪಘಾತಕ್ಕೀಡಾಗಿ ತಂದೆ-ಮಗ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಹಾಸನ ಜಿಲ್ಲೆಯ ಆಲೂರು ಬಳಿ ನಡೆದಿದೆ.

ತಮಿಳುನಾಡು ಮೂಲದ ಅಂಜನಪ್ಪ (40) ಹಾಗೂ ಮಗ ಕಾರ್ತಿಕ್ (17) ಮೃತ ದುರ್ದೈವಿಗಳು. ಎರಡು ಕಾರಿನಲ್ಲಿ 10 ಜನರು ಧರ್ಮಸ್ಥಳಕ್ಕೆ ಪ್ರಯಾಣಿಸಿದ್ದರು. ಆಲೂರು ತಾಲೂಕಿನ ಆಲೂರು-ಈಶ್ವರಹಳ್ಳಿ ಕೂಡಿಗೆ ಬಳಿ ಟ್ಯಾಂಕರ್ ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ತಂದೆ-ಮಗ ಸ್ಥಳದಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ವ್ಯಕ್ತಿ ರಾಮಚಂದ್ರ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ.

ಆಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...