Shocking News: ನಮಸ್ಕಾರ ಮಾಡುತ್ತಿದ್ದ ಯುವತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ದುರ್ಮರಣ

ಬೆಳಗಾವಿ: ದೀರ್ಘದಂಡ ನಮಸ್ಕಾರ ಮಾಡುತ್ತಾ ದೇವಸ್ಥಾನಕ್ಕೆ ಬರುತ್ತಿದ್ದ ಯುವತಿಯ ಮೇಲೆ ಕಾರು ಹರಿದು ಯುವತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘೋರ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತೀರ್ಥ್ ಗ್ರಾಮದಲ್ಲಿ ನಡೆದಿದೆ.

ಐಶ್ವರ್ಯ (22) ಮೃತ ಯುವತಿ. ತೀರ್ಥ ಗ್ರಾಮದಲ್ಲಿ ಜಾತ್ರೆ ನಡೆಯುತ್ತಿತ್ತು. ಈ ಹಿನ್ನೆಲೆಯಲ್ಲಿ ಯುವತಿ ನದಿಯಲ್ಲಿ ಸ್ನಾನ ಮಾಡಿ ಕೃಷ್ಣಾನದಿಯಿಂದ ದೇವಸ್ಥಾನದವರೆಗೆ ದೀರ್ಘದಂಡ ನಮಸ್ಕಾರ ಮಾಡುತ್ತಾ ಸಾಗಿದ್ದಳು.

ಈ ವೇಳೆ ವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ಯುವತಿಯ ತಲೆ ಮೇಲೆ ಹರಿದಿದೆ. ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಅಥಣಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read