ಹಾಸನ: ಸರ್ಕಾರಿ ಆಸ್ಪತ್ರೆಯಲ್ಲಿ ಜನಿಸಿದ್ದ ಗಂಡು ಮಗುವನ್ನು ಅಪಹರಿಸಿರುವ ಘಟನೆ ಹಾಸನ ಜಿಲ್ಲೆ ಅರಕಲಗೋಡು ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.
ನರ್ಸ್ ಸಮವಸ್ತ್ರದಲ್ಲಿ ಮಧ್ಯರಾತ್ರಿ ಆಸ್ಪತ್ರೆಗೆ ಬಂದಿರುವ ಅಪಹರಣಕಾರರು, ಅಸ್ಸಾಂ ಮೂಲದ ಕೂಲಿ ಕಾರ್ಮಿಕ ಮಹಿಳೆಯ ನವಜಾತ ಗಂಡುಮಗುವನ್ನು ಕದ್ದು ಪರಾರಿಯಾಗಿದ್ದಾರೆ. ಮಗು ಹೊತ್ತೊಯ್ಯುತ್ತಿರುವ ದೃಶ್ಯ ಆಸ್ಪತ್ರೆಯ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
BIG NEWS: ಕ್ಯಾಂಟರ್ ಗೆ ಡಿಕ್ಕಿ ಹೊಡೆದ ಬೈಕ್; ಕಾಲೇಜು ವಿದ್ಯಾರ್ಥಿ ದುರ್ಮರಣ
ಸರ್ಕಾರಿ ಆಸ್ಪತ್ರೆಯ ಹಿಂಭಾಗಿಲಿನ ಮೂಲಕ ಬಂದು ದುಷ್ಕರ್ಮಿಗಳು ಈ ಕೃತ್ಯವೆಸಗಿದ್ದಾರೆ. ಮಗು ಅಪಹರಣದ ಬಗ್ಗೆ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ದೀಪಕ್ ಅರಕಲಗೋಡು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.