alex Certify SHOCKING NEWS: ಪತ್ನಿಯನ್ನೇ ಕೊಚ್ಚಿ ಕೊಲೆಗೈದ ಪತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಪತ್ನಿಯನ್ನೇ ಕೊಚ್ಚಿ ಕೊಲೆಗೈದ ಪತಿ

ಚಾಮರಾಜನರ: ಗಂಡ-ಹೆಂಡತಿ ನಡುವಿನ ಜಗಳ ತಾರಕಕ್ಕೇರಿ ಪತ್ನಿಯ ಕೊಲೆಯಲ್ಲಿ ಅಂತ್ಯವಾದ ಘಟನೆ ಚಾಮರಾಜನಗರದ ಕೊತ್ತಲವಾಡಿ ಗ್ರಾಮದಲ್ಲಿ ನಡೆದಿದೆ.

30 ವರ್ಷದ ರತ್ನಮ್ಮ ಪತಿಯಿಂದಲೇ ಕೊಲೆಯಾದ ಮಹಿಳೆ. ಪತಿ ಮಹೇಶ್ ರತ್ನಮ್ಮಳನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದಿದ್ದಾನೆ.

ಮನೆಯಲ್ಲಿ ಪತಿ-ಪತ್ನಿ ನಡುವೆ ಆಗಾಗ ಜಗಳವಾಗುತ್ತಿತ್ತು ಎನ್ನಲಾಗಿದೆ. ಇಂದು ಜಗಳ ವಿಕೋಪಕ್ಕೆ ತಿರುಗಿದ್ದು, ಮಚ್ಚು ಹಿಡಿದು ಬಂದ ಮಹೇಶ್ ಪತ್ನಿಯ ಮೇಲೆ ಮನಬಂದಂತೆ ಬೀಸಿದ್ದು, ಕೊಚ್ಚಿ ಕೊಲೆಗೈದಿದ್ದಾನೆ. ಸ್ಥಳದಲ್ಲೇ ಪತ್ನಿ ಸಾವನ್ನಪ್ಪಿದ್ದಾಳೆ.

ಚಾಮರಾಜನಗರ ಗ್ರಾಮಾಂತರ ಪೊಲೀಸರು ಆರೋಪಿ ಮಹೇಶ್ ನನ್ನು ಬಂಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...