alex Certify SHOCKING NEWS: ಪಾಗಲ್ ಪ್ರೇಮಿಯಿಂದ ಅಪರಿಚಿತ ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಪಾಗಲ್ ಪ್ರೇಮಿಯಿಂದ ಅಪರಿಚಿತ ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

ರೌಡಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ | Prajavani

ಬೆಂಗಳೂರು: ಪಾಗಲ್ ಪ್ರೇಮಿಯೊಬ್ಬ ತಾನು ಪ್ರೀತಿಸಿದ ಯುವತಿಯ ಪ್ರೀತಿ ಉಳಿಸಿಕೊಳ್ಳಲು ಆಕೆಯನ್ನು ಪ್ರೀತಿಸುತ್ತಿದ್ದ ಯುವಕನ ಮೇಲೆ ಹಲ್ಲೆ ಮಾಡಲು ಹೋಗಿ ಅಪರಿಚಿತ ವ್ಯಕ್ತಿಯನ್ನು ಮಾರಕಾಸ್ತ್ರಗಳಿಂದ ಹೊಡೆದು ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಮಂಜೇಶ್ ಹಾಗೂ ಆತನ ಗ್ಯಾಂಗ್ ಹುಚ್ಚಾಟ ಮೆರೆದಿದ್ದು, ಮಾಗಡಿ ರಸ್ತೆಯಲ್ಲಿನ ಬಾರ್ ಬಳಿ ಅಪರಿಚಿತ ವ್ಯಕ್ತಿಯೊಬ್ಬ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾನೆ.

ಮಂಜೇಶ್ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಆದರೆ ಯುವತಿಗೆ ಮಂಜೇಶ್ ಇಷ್ಟವಿರಲಿಲ್ಲ. ನಿತಿನ್ ಎಂಬಾತನನ್ನು ಯುವತಿ ಪ್ರೀತಿಸುತ್ತಿದ್ದಳು. ಆದರೆ ತಾನು ಇಷ್ಟಪಟ್ಟ ಹುಡುಗಿಯನ್ನು ಹೇಗಾದರೂ ಮಾಡಿ ಒಲಿಸಿಕೊಳ್ಳಬೇಕು ಎಂಬ ಕಾರಣಕ್ಕೆ ಆಕೆ ಪ್ರೀತಿಸುತ್ತಿದ್ದ ಯುವಕನ ಮೇಲೆ ಹಲ್ಲೆ ನಡೆಸಲು ಪ್ಲಾನ್ ಮಾಡಿದ್ದಾನೆ.

ಮಾತನಾಡಬೇಕು ಎಂದು ಮಂಜೇಶ್, ನಿತಿನ್ ನನ್ನು ಕರೆದಿದ್ದು, ಸ್ಥಳಕ್ಕೆ ಬಂದ ವ್ಯಕ್ತಿ ನಿತಿನ್ ಎಂದು ಭಾವಿಸಿ ಏಕಾಏಕಿ ಮಾರಕಾಸ್ತ್ರಗಳಿಂದ ಮಂಜೇಶ್ ಹಾಗೂ ಗ್ಯಾಂಗ್ ಅಪರಿಚಿತನ ಮೇಲೆ ಹಲ್ಲೆ ನಡೆಸಿದೆ. ಈ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಗಂಭೀರವಾಗಿ ಗಾಯಗೊಂಡ ವ್ಯಕ್ತಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ಆರೋಪಿ ಮಂಜೇಶ್ ಹಾಗೂ ಗ್ಯಾಂಗ್ ಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...