ಚಾಮರಾಜನಗರ: ಕಬ್ಬು ತುಂಬಿಕೊಂಡು ಸಾಗುತ್ತಿದ್ದ ಲಾರಿಯೊಂದು ಪಾದಚಾರಿಗಳ ಮೇಲೆ ಬಿದ್ದು ಇಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ಚಾಮರಾಜನಗರದ ಡಿವಿಯೇಷನ್ ರಸ್ತೆಯಲ್ಲಿ ನಡೆದಿದೆ.
ಕಬ್ಬಿನ ಲಾರಿ ಬಣ್ಣಾರಿ ಸಕ್ಕರೆ ಕಾರ್ಖಾನೆಗೆ ತೆರಳುತ್ತಿತ್ತು. ಡಿವಿಯೇಷನ್ ರಸ್ತೆಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಲಾರಿ ಪಾದಚಾರಿಗಳ ಮೇಲೆ ಪಲ್ಟಿಯಾಗಿದೆ. ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ.
ಕಬ್ಬುಗಳ ಅಡಿಯಲ್ಲಿ ಇಬ್ಬರ ಮೃತದೇಹ ಸಿಲುಕಿಕೊಂಡಿದ್ದು, ಸಂಚಾರಿ ಪೊಲೀಸರು ಕ್ರೇನ್ ಸಹಾಯದಿಂದ ಮೃತದೇಹ ಹೊರತೆಗೆದಿದ್ದಾರೆ. ಮೃತರನ್ನು ಉತ್ತರ ಪ್ರದೇಶ ಮೂಲದ 17 ವರ್ಷದ ಅತುಲ್ ಹಾಗೂ ಮಯೂರ್ ಎಂದು ಗುರುತಿಸಲಾಗಿದೆ.