ಮೈಸೂರು: 9 ವರ್ಷದ ಬಾಲಕಿ ಮೇಲೆ ಯುವಕರಿಬ್ಬರು ಅತ್ಯಾಚಾರವೆಸಗಿ ಪರಾರಿಯಾಗಿರುವ ಘಟನೆ ಮೈಸೂರುನಲ್ಲಿ ಬೆಳಕಿಗೆ ಬಂದಿದೆ.
ಮೈಸೂರಿನ ವಿ.ವಿ ಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, 9 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಯುವಕರು ಪೈಶಾಚಿಕ ಕೃತ್ಯವೆಸಗಿದ್ದಾರೆ.
ಬಾಲಕಿ ತೀವ್ರ ಅನಾರೋಗ್ಯಕ್ಕೊಳಗಾದ ಬೆನ್ನಲ್ಲೇ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಈ ವೇಳೆ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಯುವಕರ ಪತ್ತೆಗಾಗಿ ಬಲೆ ಬೀಸಿದ್ದಾರೆ.