ಕೊಪ್ಪಳ: ಪೈಪ್ ಲೈನ್ ಅಳವಡಿಸಲು ತೆಗೆಯಲಾಗಿದ್ದ ಗುಂಡಿಗೆ ಬಿದ್ದು, 13 ತಿಂಗಳ ಮಗು ದಾರುಣವಾಗಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಮುರುಡಿ ಗ್ರಾಮದಲ್ಲಿ ನಡೆದಿದೆ.
ಜಲಜೀವನ್ ಮಷಿನ್ ಪೈಪ್ ಲೈನ್ ಅಳವಡಿಕೆ ಕಾಮಗಾರಿಗಾಗಿ ಗುಂಡಿ ಅಗೆಯಲಾಗಿತ್ತು. 13 ತಿಂಗಳ ಪುಟ್ಟ ಕಂದಮ್ಮ ಅನುಪಮಾ ಆಕಸ್ಮಿಕವಾಗಿ ಗುಂಡಿಯೊಳಗೆ ಬಿದ್ದಿದೆ. ತಕ್ಷಣ ಮಗುವನ್ನು ಮೇಲಕೆತ್ತಿ ಆಸ್ಪತ್ರೆಗೆ ಸಾಗಿಸಲಾಗಿದೆ.
ಕೊರೋನಾದಿಂದ ಮೃತಪಟ್ಟ ಸ್ನೇಹಿತನ ಪತ್ನಿಗೆ ಬಾಳು ಕೊಟ್ಟ ಗೆಳೆಯ
ಆದರೆ ಆಸ್ಪತ್ರೆಗೆ ಹೋಗುವ ಮೊದಲೇ ಮಾರ್ಗ ಮಧ್ಯೆಯೇ ಮಗು ಉಸಿರು ಚೆಲ್ಲಿದೆ. ಕಾಮಗಾರಿ ಸ್ಥಳದಲ್ಲಿ ಗುತ್ತಿಗೆದಾರನ ಬೇಜವಾಬ್ದಾರಿಗೆ ಮಗು ಪ್ರಾಣ ಕಳೆದುಕೊಂಡಿದೆ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ