ಬೆಂಗಳೂರು: ಮಾಸ್ಕ್ ಧರಿಸದೇ ಬೇಕಾಬಿಟ್ಟಿಯಾಗಿ ಓಡಾಡುತ್ತಿದ್ದ ಯುವಕರನ್ನು ತಡೆದು ಪ್ರಶ್ನಿಸಿದ್ದಕ್ಕೆ ನಡುರಸ್ತೆಯಲ್ಲೇ ಪೊಲೀಸರನ್ನೇ ಹಿಡಿದು ಥಳಿಸಿರುವ ಘಟನೆ ಬೆಂಗಳೂರಿನ ಯಲಹಂಕದ ಚಿಕ್ಕ ಬೆಟ್ಟಹಳ್ಳಿಯಲ್ಲಿ ನಡೆದಿದೆ.
ಮಾಸ್ಕ್ ಹಾಕದೇ ಓಡಾಡುತ್ತಿದ್ದ ಸ್ಥಳೀಯ ಯುವಕರನ್ನು ತಡೆದ ಪೊಲೀಸರು, ವ್ಯಾಕ್ಸಿನೇಷನ್, ಮಾಸ್ಕ್ ಬಗ್ಗೆ ಪ್ರಶ್ನಿಸಿದ್ದಾರೆ. ಇದಕ್ಕೆ ಕೋಪಗೊಂಡ ಯುವಕರ ಗುಂಪು ಸಬ್ ಇನ್ಸ್ ಪೆಕ್ಟರ್ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಗಳ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ.
ಅಲ್ಲದೇ ಪೊಲೀಸ್ ಸಿಬ್ಬಂದಿಗಳ ಕೈಲಿದ್ದ ಲಾಠಿಯನ್ನು ಕಿತ್ತುಕೊಂಡು ಥಳಿಸಿದ್ದಾರೆ. ಮೂವರು ಪೊಲೀಸ್ ಸಿಬ್ಬಂದಿಗಳು ಗಾಯಗೊಂಡಿದ್ದಾರೆ. ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಾಪತ್ತೆಯಾಗಿರುವ ಪುಂಡರಿಗಾಗಿ ಶೋಧ ನಡೆದಿದೆ.