ವಿಜಯಪುರ: ಪ್ಲಾಸ್ಟಿಕ್ ಅಂಗಡಿಯಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ ಇಬ್ಬರು ಸಜೀವ ದಹನಗೊಂಡಿರುವ ಘಟನೆ ವಿಜಯಪುರ ಜಿಲ್ಲೆ ನಿಡಗುಂದಿ ಹೊರವಲಯದಲ್ಲಿ ನಡೆದಿದೆ.
ಬಸವನಬಾಗೇವಾಡಿ ಕ್ರಾಸ್ ಬಳಿ ಇದ್ದ ಪ್ಲಾಸ್ಟಿಕ್ ಅಂಗಡಿಯಲ್ಲಿ ಈ ದುರಂತ ಸಂಭವಿಸಿದೆ. ಅಂಗಡಿಯಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಅವಘಡ ಸಂಭವಿಸಿದ್ದು, ಅಂಗಡಿಯಲ್ಲಿ ಮಲಗಿದ್ದ ಅಶೋಕ ದೆಸ್ನೋಯಿ (35), ಲಿಂಬಾರಾಮ ದೆಸ್ನೋಯಿ (35) ಮೃತರು.
ನಿಡಗುಂದಿ ಪೊಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ದೌಡಾಯಿಸಿದ್ದು, ಬೆಂಕಿ ನಂದಿಸಿದ್ದಾರೆ.