alex Certify SHOCKING NEWS: ಪ್ಲಾಸ್ಟಿಕ್ ಅಂಗಡಿಯಲ್ಲಿ ಬೆಂಕಿ ದುರಂತ; ಇಬ್ಬರು ಸಜೀವದಹನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಪ್ಲಾಸ್ಟಿಕ್ ಅಂಗಡಿಯಲ್ಲಿ ಬೆಂಕಿ ದುರಂತ; ಇಬ್ಬರು ಸಜೀವದಹನ

ವಿಜಯಪುರ: ಪ್ಲಾಸ್ಟಿಕ್ ಅಂಗಡಿಯಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ ಇಬ್ಬರು ಸಜೀವ ದಹನಗೊಂಡಿರುವ ಘಟನೆ ವಿಜಯಪುರ ಜಿಲ್ಲೆ ನಿಡಗುಂದಿ ಹೊರವಲಯದಲ್ಲಿ ನಡೆದಿದೆ.

ಬಸವನಬಾಗೇವಾಡಿ ಕ್ರಾಸ್ ಬಳಿ ಇದ್ದ ಪ್ಲಾಸ್ಟಿಕ್ ಅಂಗಡಿಯಲ್ಲಿ ಈ ದುರಂತ ಸಂಭವಿಸಿದೆ. ಅಂಗಡಿಯಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಅವಘಡ ಸಂಭವಿಸಿದ್ದು, ಅಂಗಡಿಯಲ್ಲಿ ಮಲಗಿದ್ದ ಅಶೋಕ ದೆಸ್ನೋಯಿ (35), ಲಿಂಬಾರಾಮ ದೆಸ್ನೋಯಿ (35) ಮೃತರು.

ನಿಡಗುಂದಿ ಪೊಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ದೌಡಾಯಿಸಿದ್ದು, ಬೆಂಕಿ ನಂದಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...