alex Certify SHOCKING NEWS: ಬಾಯ್ ಫ್ರೆಂಡ್ ಜತೆ ಸೇರಿ ಯುವತಿಯಿಂದ ರಾಬರಿಗೆ ಯತ್ನ; ಇಬ್ಬರು ಆರೋಪಿಗಳು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಬಾಯ್ ಫ್ರೆಂಡ್ ಜತೆ ಸೇರಿ ಯುವತಿಯಿಂದ ರಾಬರಿಗೆ ಯತ್ನ; ಇಬ್ಬರು ಆರೋಪಿಗಳು ಅರೆಸ್ಟ್

ಬೆಂಗಳೂರು: ಯುವತಿಯೊಬ್ಬಳು ತನ್ನ ಬಾಯ್ ಫ್ರೆಂಡ್ ಜತೆ ಸೇರಿ ರಾಬರಿಗೆ ಯತ್ನಿಸಿರುವ ಘಟನೆ ಬೆಂಗಳೂರಿನ ನಂದಿನಿ ಲೇಔಟ್ ಪಾರ್ಕ್ ಬಳಿ ನಡೆದಿದೆ.

ಪಾರ್ಕ್ ನಲ್ಲಿ ವಾಕಿಂಗ್ ಮಾಡುತ್ತಿದ್ದ ಮಹಿಳೆಯ ಮುಖಕ್ಕೆ ಖಾರದ ಪುಡಿ ಎರಚಿ ಸರ ಕದಿಯಲು ಯುವಕ ಹಾಗೂ ಯುವತಿ ಯತ್ನಿಸಿದ್ದಾರೆ. ಈ ವೇಳೆ ಮಹಿಳೆ ಕೂಗಿಕೊಳ್ಳುತ್ತಿದ್ದಂತೆ ಸ್ಥಳೀಯರು ಸ್ಥಳಕ್ಕಾಗಮಿಸಿದ್ದಾರೆ. ತಕ್ಷಣ ಯುವತಿ ತನ್ನ ಗೆಳೆಯನ ಜತೆ ಸ್ಥಳದಿಂದ ಪರಾರಿಯಾಗಿದ್ದಾರೆ. ಮೇ 28ರಂದು ಈ ಘಟನೆ ನಡೆದಿದ್ದು ಇದೀಗ ನಂದಿನಿ ಲೇಔಟ್ ಠಾಣೆ ಪೊಲೀಸರು ಯುವಕ ಹಾಗೂ ಯುವತಿ ಇಬ್ಬರನ್ನು ಬಂಧಿಸಿದ್ದಾರೆ.

ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಯುವಕ-ಯುವತಿ, ಲೋನ್ ಕಟ್ಟಲು ಹಣವಿಲ್ಲ ಎಂಬ ಕಾರಣಕ್ಕೆ ಕಳ್ಳತನ ಮಾಡಲು ಯತ್ನಿಸಿದ್ದಾಗಿ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...