
ಬೆಂಗಳೂರು: ಬಿಜೆಪಿ ಮುಖಂಡ ಸಿದ್ಧೇಶ್ ಯಾದವ್ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ .
ಬಳ್ಳಾರಿ ಜಿಲ್ಲಾ ಬಿಜೆಪಿ ಮುಖಂಡರಾಗಿದ್ದ ಸಿದ್ದೇಶ್ ಯಾದವ್, ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಇಂದು ಬೆಳಿಗ್ಗೆ ನಡೆದಿದ್ದ ಸಭೆಯಲ್ಲಿ ಪಾಲ್ಗೊಂಡಿದ್ದರು. ಸಭೆಯಲ್ಲಿಯೇ ಸಿದ್ದೇಶ್ ಯಾದವ್ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿದೆ.
ತಕ್ಷಣ ಅವರನ್ನು ಕೆ.ಸಿ.ಜನರಲ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅಷ್ಟರಲ್ಲೇ ಸಿದ್ಧೇಶ್ ಯಾದವ್ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.