ರಾಯಚೂರು: ಮಹಿಳೆಯೊಬ್ಬರು ಮಗುವಿನೊಂದಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಹೃದಯವಿದ್ರಾವಕ ಘಟನೆ ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣದಲ್ಲಿ ಬೆಳಕಿಗೆ ಬಂದಿದೆ.
ಶಿರೀಷ (35) ಹಾಗೂ 2 ವರ್ಷದ ಮಗು ಮೃತರು. ಬ್ಯಾಂಕ್ ಉದ್ಯೋಗಿ ಆಗಿದ್ದ ಶಿರೀಷ, ಸಿರಿವಾರದ ತಮ್ಮ ಮನೆಯಲ್ಲಿ ಸೀಮೆ ಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ. ಈ ವೇಳೆ 2 ವರ್ಷದ ಮಗುವಿಗೂ ಬೆಂಕಿ ತಗುಲಿದ್ದು, ತಾಯಿ, ಮಗು ಇಬ್ಬರೂ ಸಜೀವದಹನಗೊಂಡಿದ್ದಾರೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸಿರಿವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.