ಆಘಾತಕಾರಿ ಘಟನೆಯೊಂದರಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ 11 ವರ್ಷದ ಬಾಲಕಿ ಮಗುವಿಗೆ ಜನ್ಮ ನೀಡಿರುವ ಘಟನೆ ಉತ್ತರ ಪ್ರದೇಶದ ಉನ್ನಾವೋದಲ್ಲಿ ನಡೆದಿದೆ.
ಈ ಬಾಲಕಿ ಮೇಲೆ ಮೂವರು ಸಾಮೂಹಿಕ ಅತ್ಯಾಚಾರ ಎಸಗಿದ್ದರು ಎಂದು ಹೇಳಲಾಗಿದ್ದು, ಬಾಲಕಿಗಾಗಲಿ ಅಥವಾ ಆಕೆಯ ಪೋಷಕರಿಗಾಗಲಿ ಗರ್ಭಿಣಿ ಎಂಬ ವಿಚಾರವೇ ಅರಿವಾಗಿರಲಿಲ್ಲ.
ಹೊಟ್ಟೆ ನೋವು ಎಂಬ ಕಾರಣಕ್ಕೆ ಆಸ್ಪತ್ರೆಗೆ ಹೋದ ಸಂದರ್ಭದಲ್ಲಿ ಆಕೆ ಗಂಡು ಮಗುವಿಗೆ ಜನ್ಮ ನೀಡಿದ್ದು, ತಾಯಿ ಮಗು ಈಗ ಆರೋಗ್ಯವಾಗಿದ್ದಾರೆ ಎಂದು ಹೇಳಲಾಗಿದೆ. ದೂರು ದಾಖಲಿಸಿಕೊಂಡಿರುವ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ ಪೋಸ್ಕೋ ಕಾಯ್ದೆ ಅಡಿ ಪ್ರಕರಣ ದಾಖಲಿಸಿದ್ದಾರೆ.