alex Certify SHOCKING NEWS: ಮೈಸೂರಿನಲ್ಲಿ ಮತ್ತೆ ಮೂವರಲ್ಲಿ ಡೆಲ್ಟಾ ಪ್ಲಸ್ ಪತ್ತೆ; ಹೊಸ ಹೆಮ್ಮಾರಿಗೆ ದೇಶದಲ್ಲಿ ಮೊದಲ ಬಲಿ…..? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಮೈಸೂರಿನಲ್ಲಿ ಮತ್ತೆ ಮೂವರಲ್ಲಿ ಡೆಲ್ಟಾ ಪ್ಲಸ್ ಪತ್ತೆ; ಹೊಸ ಹೆಮ್ಮಾರಿಗೆ ದೇಶದಲ್ಲಿ ಮೊದಲ ಬಲಿ…..?

ಮೈಸೂರು: ಕೊರೊನಾ ಎರಡನೆ ಅಲೆಯ ರೂಪಾಂತರದ ಅಟ್ಟಹಾಸ ಆರಂಭವಾಗಿದ್ದು, ಇದೀಗ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮತ್ತೆ ಮೂವರಲ್ಲಿ ಡೆಲ್ಟಾ ಪ್ಲಸ್ ವೈರಸ್ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ಮೇ ತಿಂಗಳಿನಲ್ಲಿಯೇ 20ಕ್ಕೂ ಹೆಚ್ಚು ಜನರ ಸ್ಯಾಂಪಲ್ ನ್ನು ಲ್ಯಾಬ್ ಗೆ ಕಳುಹಿಸಲಾಗಿತ್ತು. ಈ ಸ್ಯಾಂಪಲ್ಸ್ ಪೈಕಿ ಮೂವರಲ್ಲಿ ಡೆಲ್ಟಾ ಪ್ಲಸ್ ವೈರಸ್ ಪತ್ತೆಯಾಗಿದೆ ಎಂದು ಆರೋಗ್ಯ ಇಲಾಖೆ ಮೂಲಗಳು ದೃಢಪಡಿಸಿವೆ. ಸದ್ಯ ಮೂವರು ಡೆಲ್ಟಾ ಪ್ಲಸ್ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ನಡುವೆ ಡೆಲ್ಟಾ ಪ್ಲಸ್ ವೈರಸ್ ದೇಶದಲ್ಲಿ ಮೊದಲ ಬಲಿ ಪಡೆದಿದೆ ಎಂಬ ಅನುಮಾನ ಆರಂಭವಾಗಿದೆ. ಮಧ್ಯಪ್ರದೇಶದ ಮೃತಪಟ್ಟ ಮಹಿಳೆಯೊಬ್ಬರಿಗೆ ಡೆಲ್ಟಾ ಪ್ಲಸ್ ಸೋಂಕು ಇರುವುದು ಜಿನೋಮ್ ಸೀಕ್ವೆನ್ಸಿಂಗ್ ನಲ್ಲಿ ದೃಢಪಟ್ಟಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...