ಮಂಡ್ಯ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರು ಪಟ್ಟಣದಲ್ಲಿ ನಡೆದಿದೆ.
ಬೆಳ್ಳೂರು ಪಟ್ಟಣದ ಅಂಬೇಡ್ಕರ್ ಕಾಲೋನಿ ನಿವಾಸಿ ಸುನೀಲ್ (36) ಹತ್ಯೆಯಾದ ಯುವಕ. ಸಂತೆ ಮೈದಾನದ ಬಳಿ ದುಷ್ಕರ್ಮಿಗಳು ಯುವಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ರಕ್ತದ ಮಡುವಲ್ಲಿ ಬಿದ್ದಿದ್ದ ಯುವಕನ್ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಆದರೆ ಚಿಕಿತ್ಸೆ ಫಲಿಸದೇ ಸುನೀಲ್ ಮೃತಪಟ್ಟಿದ್ದಾರೆ.
ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ಇತ್ತೀಚೆಗೆ ಸಾಲು ಸಾಲು ಕೊಲೆ ಪ್ರಕರಣ ನಡೆಯುತ್ತಿದ್ದು, ಯುವಕರು ರಕ್ತಪಾತಕ್ಕೆ ಬಲಿಯಾಗುತ್ತಿದ್ದಾರೆ. ಇದು ಜಿಲ್ಲೆಯಾದ್ಯಂತ ಜನರಲ್ಲಿ ಆತಂಕ ಸೃಷ್ಟಿಸಿದೆ.