ಮಂಡ್ಯ: ದುಷ್ಕರ್ಮಿಗಳು ರೈಲ್ವೆ ಟ್ರ್ಯಾಕ್ ಬಳಿ ಯುವಕನೋರ್ವನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಮಂಡ್ಯ ಜಿಲ್ಲೆಯ ಕಲ್ಲಹಳ್ಳಿ ಬಳಿ ನಡೆದಿದೆ.
21 ವರ್ಷದ ರಕ್ಷಿತ್ ಕೊಲೆಯಾದ ದುರ್ದೈವಿ. ತಡರಾತ್ರಿ 1 ಗಂಟೆ ಸುಮಾರಿಗೆ ಕಲ್ಲಹಳ್ಳಿ ರೈಲ್ವೆ ಟ್ರ್ಯಾಕ್ ಬಳಿ ದುಷ್ಕರ್ಮಿಗಳು ಡ್ರ್ಯಾಗರ್ ನಿಂದ ಚುಚ್ಚಿ ಯುವಕನನ್ನು ಹತ್ಯೆಗೈದು ಪರಾರಿಯಾಗಿದ್ದಾರೆ.
ಕೊಲೆಗೆ ಕಾರಣ ತಿಳಿದುಬಂದಿಲ್ಲ. ಮಂಡ್ಯ ಪಶ್ಚಿಮ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.