ಬೆಂಗಳೂರು: ಕಾನ್ಸ್ಟೇಬಲ್ ಓರ್ವರು ಲಾಡ್ಜ್ ಒಂದರಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಉಪ್ಪಾರಪೇಟೆಯಲ್ಲಿ ನಡೆದಿದೆ.
ಚಿಕ್ಕಬಳ್ಳಾಪುರದ ಗೌರಿಬಿದನೂರಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಕಾನ್ಸ್ಟೇಬಲ್ ರಂಗನಾಥ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿರುವ ಪೊಲೀಸ್ ಪೇದೆ.
ಬೇಸರಗೊಂಡಿದ್ದ ಪುನೀತ್ ಅಭಿಮಾನಿಗಳಿಗಾಗಿ ಮಹತ್ವದ ನಿರ್ಧಾರ ಪ್ರಕಟಿಸಿದ ಫಿಲ್ಮ್ ಚೇಂಬರ್
ಉಪ್ಪಾರಪೇಟೆಯಲ್ಲಿನ ಖಾಸಗಿ ಲಾಡ್ಜ್ ನ ರೂಂ ಒಂದರಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.