ಕೊಪ್ಪಳ: ಹಾಸ್ಟೆಲ್ ಗೆ ತೆರಳುತ್ತಿದ್ದ ವಿದ್ಯಾರ್ಥಿಗಳಿಬ್ಬರ ಮೇಲೆ ಟ್ರ್ಯಾಕ್ಟರ್ ಹರಿದ ಪರಿಣಾಮ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೊಪ್ಪಳ ಜಿಲ್ಲೆ ಕವಲೂರು ಗ್ರಾಮದ ಬಳಿ ನಡೆದಿದೆ.
16 ವರ್ಷದ ಭರತ್ ಮೃತ ವಿದ್ಯಾರ್ಥಿ. 11 ವರ್ಷದ ಮತ್ತೋರ್ವ ವಿದ್ಯಾರ್ಥಿ ಅಜಯ್ ಬಲಗೈಗೆ ಗಂಭೀರವಾಗಿ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿದ್ಯಾರ್ಥಿಗಳಿಬ್ಬರೂ ಸೈಕಲ್ ನಲ್ಲಿ ಹಾಸ್ಟೇಲ್ ಗೆ ತೆರಳುತ್ತಿದ್ದರು. ಈ ವೇಳೆ ಮಣ್ಣು ತುಂಬಿಕೊಂಡು ಬಂದ ಟ್ರ್ಯಾಕ್ಟರ್ ಚಾಲಕನ ನಿಯಂತ್ರಣ ತಪ್ಪಿ ವಿದ್ಯಾರ್ಥಿಗಳ ಮೇಲೆ ಹರಿದು ದುರಂತ ಸಂಭವಿಸಿದೆ. ಅಳವಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.