ಬೆಂಗಳೂರು: ಜಮೀನಿಗೆ ಅಕ್ರಮವಾಗಿ ಅಳವಡಿಸಲಾಗಿದ್ದ ವಿದ್ಯುತ್ ಬೇಲಿ ತಗುಲಿ ರೈತ ಸಾವನ್ನಪ್ಪಿದ್ದರಿಂದ ಉದ್ರಿಕ್ತಗೊಂಡ ಸ್ಥಳೀಯರು ಜಮೀನು ಮಾಲೀಕನನ್ನು ಹಿಡಿದು ಹಿಗ್ಗಾ ಮುಗ್ಗಾ ಥಳಿಸಿ ಸಾಯಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ವಸಂತರಾವ್ ಮೃತ ರೈತ. ವಿದ್ಯುತ್ ತಂತಿ ತಗುಲಿ ವಸಂತರಾವ್ ಮೃತಪಟ್ಟ ವಿಷಯ ಗೊತ್ತಾಗುತ್ತಿದ್ದಂತೆ ಸ್ಥಳಕ್ಕಾಗಿಮಿಸಿದ ಗ್ರಾಮಸ್ಥರು ಜಮೀನು ಮಾಲೀಕ ಅಶ್ವತ್ಥರಾವ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಅಶ್ವತ್ಥ ರಾವ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಮೋದಿ ಸರ್ಕಾರದ ವಿರುದ್ಧ ಮತ್ತೆ ಕಿಡಿಕಾರಿದ ಸುಬ್ರಮಣಿಯನ್ ಸ್ವಾಮಿ
ಆದರೆ ಚಿಕಿತ್ಸೆ ಫಲಕಾರಿಯಾಗದೇ ಅಶ್ವತ್ಥರಾವ್ ಕೊನೆಯುಸಿರೆಳೆದಿದ್ದಾರೆ. ಮಂಚೇನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.