ಕಳೆದ ಕೆಲವು ದಿನಗಳಿಂದ ಕೋವಿಡ್ ಸೋಂಕಿಗೆ ಒಳಗಾಗಿರುವ ಹೈದರಾಬಾದ್ನ ಐಐಟಿಯ ಎಲ್ಲಾ ವಿದ್ಯಾರ್ಥಿಗಳು ಸಂಪೂರ್ಣವಾಗಿ ಕೊರೊನಾ ಲಸಿಕೆಯನ್ನು ಸ್ವೀಕರಿಸಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕಳೆದ ಒಂದು ವಾರದಲ್ಲಿ ಹೈದರಾಬಾದ್ನಲ್ಲಿ 112 ವಿದ್ಯಾರ್ಥಿಗಳು ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ ಎನ್ನಲಾಗಿದೆ.
ಈ ಎಲ್ಲ ವಿದ್ಯಾರ್ಥಿಗಳು 2 ಡೋಸ್ ಕೊರೊನಾ ಲಸಿಕೆಗಳನ್ನು ಸ್ವೀಕರಿಸಿದ್ದಾರೆ ಎಂದು ಹೈದರಾಬಾದ್ನ ಅಧಿಕಾರಿಗಳು ತಿಳಿಸಿದ್ದಾರೆ. ಐಐಟಿ ಹೈದರಾಬಾದ್ ಕ್ಯಾಂಪಸ್ನಲ್ಲಿರುವ ಎಲ್ಲಾ ಕೋವಿಡ್ ವಿದ್ಯಾರ್ಥಿಗಳನ್ನು ಪ್ರತ್ಯೇಕವಾಗಿ ಇಡಲಾಗಿದೆ. ಇವರೆಲ್ಲ ಸೌಮ್ಯ ಲಕ್ಷಣಗಳನ್ನು ಹೊಂದಿದ್ದಾರೆ. ಕೆಲವರಂತೂ ಲಕ್ಷಣರಹಿತ ಸೋಂಕನ್ನು ಹೊಂದಿದ್ದಾರೆ ಎನ್ನಲಾಗಿದೆ.
ನಮ್ಮಲ್ಲಿ ಪ್ರಸ್ತುತ 112 ವಿದ್ಯಾರ್ಥಿಗಳು ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಪ್ರತಿಯೊಬ್ಬರನ್ನು ಐಸೋಲೇಷನ್ನಲ್ಲಿ ಪ್ರತ್ಯೇಕವಾಗಿ ಇಡಲಾಗಿದೆ. ಇವರೆಲ್ಲರೂ ಬಹುತೇಕರು ಸೌಮ್ಯ ಹಾಗೂ ಕೆಲವರು ಲಕ್ಷಣರಹಿತ ಸೋಂಕನ್ನು ಹೊಂದಿದ್ದಾರೆ. ಇವರೆಲ್ಲ ನಾಲ್ಕೈದು ದಿನಗಳಲ್ಲಿ ಸೋಂಕಿನಿಂದ ಗುಣಮುಖರಾಗಬಹುದು ಎಂದು ಅಂದಾಜಿಸಲಾಗಿದೆ ಎಂದು ಐಐಟಿ ಆಡಳಿತ ಮಂಡಳಿ ಹೇಳಿದೆ.