alex Certify SHOCKING NEWS: ಸುಟ್ಟು ಕರಕಲಾದ ಕಾರಿನಲ್ಲಿ ಫೈನಾನ್ಸ್ ಕಂಪನಿ ಮ್ಯಾನೇಜರ್ ಮೃತದೇಹ ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಸುಟ್ಟು ಕರಕಲಾದ ಕಾರಿನಲ್ಲಿ ಫೈನಾನ್ಸ್ ಕಂಪನಿ ಮ್ಯಾನೇಜರ್ ಮೃತದೇಹ ಪತ್ತೆ

ಬೆಂಗಳೂರು: ಸುಟ್ಟು ಕರಕಲಾಗಿರುವ ಕಾರೊಂದರಲ್ಲಿ ಫೈನಾನ್ಸ್ ಕಂಪನಿಯ ಮ್ಯಾನೇಜರ್ ಓರ್ವರ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬೆಂಗಳೂರು ಹೊರವಲಯದ ಹೆಗ್ಗನಹಳ್ಳಿ ಕ್ರಾಸ್ ಬಳಿ ನಡೆದಿದೆ.

ಮೃತ ವ್ಯಕ್ತಿ ಯಲಹಂಕದ ನ್ಯೂ ಟೌನ್ ನಿವಾಸಿ ಆರಿಫ್ ಪಾಶಾ ಎಂದು ಗುರುತಿಸಲಾಗಿದ್ದು, ಖಾಸಗಿ ಕಂಪನಿಯಲ್ಲಿ ಫೈನಾನ್ಸ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಹೆಗ್ಗನಹಳ್ಳಿಯ ಕ್ರಾಸ್ ಬಳಿ ದನ ಮೇಯಿಸುತ್ತಿದ್ದ ಕೆಲವರು ಸುಟ್ಟು ಕರಕಲಾಗಿರುವ ಕಾರು ಹಾಗೂ ಮೃತ ದೇಹ ಕಂಡು ವಿಶ್ವನಾಥಪುರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕಾರಿನ ನೋಂದಣಿ ಸಂಖ್ಯೆ ಆಧಾರದ ಮೇಲೆ ಪಾಶಾ ಗುರುತು ಪತ್ತೆ ಹಚ್ಚಲಾಗಿದೆ. ಪಾಶಾ ತಾಯಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...