alex Certify SHOCKING NEWS: ಹರ್ಷ ಕೊಲೆ ಸುದ್ದಿ ಕೇಳಿ ಸೋದರತ್ತೆ ಹೃದಯಾಘಾತದಿಂದ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಹರ್ಷ ಕೊಲೆ ಸುದ್ದಿ ಕೇಳಿ ಸೋದರತ್ತೆ ಹೃದಯಾಘಾತದಿಂದ ಸಾವು

ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಸುದ್ದಿ ಕೇಳಿ ಹರ್ಷ ಸೋದರತ್ತೆ ಹೃದಯಾಘಾತದಿಂದ ಮೃತಪಟ್ಟ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ನಿನ್ನೆ ರಾತ್ರಿ ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷ ಎಂಬ ಯುವಕನನ್ನು ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆಗೈದಿದ್ದರು. ಈ ವಿಷಯ ಗೊತ್ತಾಗುತ್ತಿದ್ದಂತೆ ಆಘಾತಕ್ಕೀಡಾಗಿದ್ದ ಹರ್ಷ ಸೋದರತ್ತೆ ಜಲಜಾಕ್ಷಿ ಇದೀಗ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಶಿವಮೊಗ್ಗದ ಶರಾವತಿ ನಗರದ ನಿವಾಸಿಯಾಗಿರುವ ಜಲಜಾಕ್ಷಿ ಅವರ ಅಂತ್ಯಕ್ರಿಯೆ ಕೂಡ ಹರ್ಷ ಅಂತ್ಯಕ್ರಿಯೆ ಬಳಿಕ ನೆರವೇರಲಿದೆ. ಬಜರಂಗದಳ ಕಾರ್ಯಕರ್ತ ಹರ್ಷ ಅಂತ್ಯಕ್ರಿಯೆ ಈಗಾಗಲೇ ವಿದ್ಯಾನಗರದ ರೋಟರಿ ಚಿತಾಗಾರದಲ್ಲಿ ನೆರವೇರಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...