ಬೆಳಗಾವಿ; ಕರಾವಳಿ ಹಾಗೂ ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥಗೊಂಡಿದ್ದು, ಈ ನಡುವೆ ನಿನ್ನೆ ಹಳ್ಳ ದಾಟುವಾಗ ನೀರಿನಲ್ಲಿ ಕೊಚ್ಚಿ ಹೋಗಿದ್ದ ಬಾಲಕಿ ಇಂದು ಶವವಾಗಿ ಪತ್ತೆಯಾಗಿದ್ದಾಳೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ರಾಮನಗರ ಕಾಲೋನಿಯಲ್ಲಿ ಬಸ್ ನಿಲ್ದಾಣದಿಂದ ತಾಯಿಯೊಂದಿಗೆ ಮನೆಗೆ ಹೋಗುತ್ತಿದ್ದಾಗ ಹಳ್ಳ ದಾಟಲು ಮುಂದಾಗಿದ್ದ ವೇಳೆ ಬಾಲಕಿ ಕಿರಣಾ ವಿಭೂತಿ, ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದಳು.
ಎನ್.ಡಿ.ಆರ್.ಎಫ್ ತಂಡ ಬಾಲಕಿಗಾಗಿ ಶೋಧಕಾರ್ಯ ನಡೆಸಿದ್ದರೂ ಬಾಲಕಿ ಪತ್ತೆಯಾಗಿರಲಿಲ್ಲ. ಇಂದು ಬಾಲಕಿಯ ಶವ ಹಳ್ಳದಲ್ಲಿ ಪತ್ತೆಯಾಗಿದ್ದು, ಹಳ್ಳದಿಂದ ಮೇಲೆತ್ತಲಾಗಿದೆ. ಕುಟುಂಬದವರ ಆಕ್ರಂದನ ಮುಗಿಲುಮುಟ್ಟಿದೆ.