alex Certify SHOCKING NEWS: ಹೃದಯದ ಕಾಯಿಲೆಗೆ ಬೇಸತ್ತ ತಾಯಿ; ಪುಟ್ಟ ಮಕ್ಕಳಿಗೆ ವಿಷವುಣಿಸಿ ಆತ್ಮಹತ್ಯೆ; ನಂತರ ಆಗಿದ್ದೇನು ಗೊತ್ತಾ…..? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಹೃದಯದ ಕಾಯಿಲೆಗೆ ಬೇಸತ್ತ ತಾಯಿ; ಪುಟ್ಟ ಮಕ್ಕಳಿಗೆ ವಿಷವುಣಿಸಿ ಆತ್ಮಹತ್ಯೆ; ನಂತರ ಆಗಿದ್ದೇನು ಗೊತ್ತಾ…..?

ಗದಗ: ತನ್ನಿಬ್ಬರು ಪುಟ್ಟ ಮಕ್ಕಳಿಗೆ ವಿಷಕೊಟ್ಟು ಬಳಿಕ ತಾಯಿಯೂ ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ಗದಗ ಜಿಲ್ಲೆ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದಲ್ಲಿ ನಡೆದಿದೆ.

ಹೃದಯ ಕಾಯಿಲೆಯಿಂದ ಬಳಲುತ್ತಿದ್ದ ಯಲ್ಲವ್ವ, ಜೀವನದಲ್ಲಿ ಜಿಗುಪ್ಸೆ ಹೊಂದಿ ತನ್ನ ಇಬ್ಬರು ಮಕ್ಕಳಿಗೆ ವಿಷವುಣಿಸಿ, ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅಸ್ವಸ್ಥರಾಗಿದ್ದ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಾಯಿ ಯಲ್ಲವ್ವ ಹಾಗೂ 2 ವರ್ಷದ ಮಗು ಸ್ವಪ್ನ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರೂ ಸಾವನ್ನಪ್ಪಿದ್ದಾರೆ.

ಆದರೆ 6 ವರ್ಷದ ಸಮರ್ಥ ಬದುಕುಳಿದಿದ್ದು, ತಾಯಿ ಹಾಗೂ ಪುಟ್ಟ ತಂಗಿಯನ್ನು ಕಳೆದುಕೊಂಡು ಅನಾಥನಾಗಿದ್ದಾನೆ. ಹೆಚ್ಚಿನ ಚಿಕಿತ್ಸೆಗಾಗಿ ಸಮರ್ಥನನ್ನು ನರಗುಂದ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ನರಗುಂದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...