ಬೆಂಗಳೂರು: ಪತ್ನಿಯನ್ನು ಚುಡಾಯಿಸಿದ್ದ ಸೆಕ್ಯೂರಿಟಿ ಗಾರ್ಡ್ ನನ್ನು ಹಾಕಿಸ್ಟಿಕ್ ನಿಂದ ಮನಬಂದಂತೆ ಥಳಿಸಿರುವ ಘಟನೆ ಬೆಂಗಳೂರಿನ ಕೆಂಪೇಗೌಡ ನಗರದಲ್ಲಿ ನಡೆದಿದೆ.
ಮಹಿಳೆಯೊಬ್ಬರು ಯೋಗಾ ಸಂಸ್ಥಾನದಲ್ಲಿ ಕೆಲಸ ಮಾಡುತ್ತಿದ್ದರು. ಅಲ್ಲಿನ ಸೆಕ್ಯೂರಿಟಿ ಗಾರ್ಡ್ ಮಹಿಳೆಗೆ ಚುಡಾಯಿಸುತ್ತಿದ್ದುದಲ್ಲದೇ ಮೊಬೈಲ್ ಗೆ ಅಶ್ಲೀಲ ಸಂದೇಶವನ್ನು ಕಳುಸುತ್ತಿದ್ದ. ಭದ್ರತಾ ಸಿಬ್ಬಂದಿಯ ಕಿರುಕುಳಕ್ಕೆ ಬೇಸತ್ತ ಮಹಿಳೆ ಪತಿಗೆ ವಿಷಯ ತಿಳಿಸಿದ್ದಾಳೆ.
18 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳು ಕಾಲೇಜಿಗೆ ಬರಲು ಕೋವಿಡ್ ಲಸಿಕೆ ಕಡ್ಡಾಯ
ಇದರಿಂದ ಕೋಪಗೊಂಡ ಮಹಿಳೆಯ ಪತಿ ವಾಸು, ಸೆಕ್ಯೂರಿಟಿ ಗಾರ್ಡ್ ನನ್ನು ಮಾತನಾಡಬೇಕು ಎಂದು ಕರೆದು ಹಾಕಿ ಸ್ಟಿಕ್ ನಿಂದ ಚೆನ್ನಾಗಿ ಥಳಿಸಿದ್ದಾರೆ. ಸೆಕ್ಯೂರಿಟಿ ಗಾರ್ಡ್ ನನ್ನು ಮನಬಂದಂತೆ ಥಳಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಹಲ್ಲೆಗೊಳಗಾದ ಸೆಕ್ಯೂರಿಟಿ ಗಾರ್ಡ್ ನನ್ನು ಯತೀಶ್ ಎಂದು ಗುರುತಿಸಲಾಗಿದೆ. ಪ್ರಕರಣ ಸಂಬಂಧ ಕೆಂಪೇಗೌಡ ನಗರ ಠಾಣೆಯಲ್ಲಿ ಇಬ್ಬರಿಂದಲೂ ದೂರು ಪ್ರತಿದೂರು ದಾಖಲಾಗಿದೆ.