alex Certify SHOCKING NEWS: ಹೆತ್ತ ಕಂದನನ್ನು ಹತ್ಯೆಗೈದು ನೇಣಿಗೆ ಕೊರಳೊಡ್ಡಿದ ತಂದೆ-ತಾಯಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಹೆತ್ತ ಕಂದನನ್ನು ಹತ್ಯೆಗೈದು ನೇಣಿಗೆ ಕೊರಳೊಡ್ಡಿದ ತಂದೆ-ತಾಯಿ

ಗದಗ: ಮೂರು ತಿಂಗಳ ಹೆತ್ತ ಮಗುವನ್ನೇ ಹತ್ಯೆಗೈದು ದಂಪತಿಗಳಿಬ್ಬರೂ ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ನಾಗೇಂದ್ರಗಡ ಗ್ರಾಮದಲ್ಲಿ ನಡೆದಿದೆ.

ಮಲ್ಲಪ್ಪ ಗಡಾದ(30) ಸುಧಾ (24) ಹಾಗೂ ಮೂರು ತಿಂಗಳ ಮಗು ರೂಪಾಶ್ರೀ ಮೃತ ದುರ್ದೈವಿಗಳು. ಕೌಟುಂಬಿಕ ಕಲಹದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.

ಮಲ್ಲಪ್ಪ ಮೃತದೇಹ ಮನೆಯ ಹಾಲ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರೆ, ಪತ್ನಿ ಸುಧಾ ಹಾಗೂ ಮಗುವಿನ ಮೃತದೇಹ ಬೆಡ್ ರೂಮ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮಗು ರೂಪಾಶ್ರೀಯನ್ನು ಕೊಂದು ಬಳಿಕ ಪತಿ-ಪತ್ನಿ ಇಬ್ಬರೂ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಗಜೇಂದ್ರಗಡ ಪೊಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...