ವಿರಾಜಪೇಟೆ: ಕೌಟುಂಬಿಕ ಕಲಹಕ್ಕೆ ಬೇಸತ್ತ ಗ್ರಾಮ ಪಂಚಾಯಿತಿ ಸದಸ್ಯೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ.
ಅರ್ವತೊಕ್ಲು ಗ್ರಾಮ ಪಂಚಾಯಿತಿ ಸದಸ್ಯೆಯಾಗಿದ್ದ 28 ವರ್ಷದ ರಮ್ಯಾ ನಾಲ್ಕು ದಿನಗಳ ಹಿಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ವಿಷಯ ಗೊತ್ತಾಗುತ್ತಿದ್ದಂತೆ ವಿರಾಜಪೇಟೆಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಚೇತರಿಸಿಕೊಂಡಿದ್ದ ರಮ್ಯಾ ನಿನ್ನೆಯಷ್ಟೇ ಡಿಸ್ಚಾರ್ಜ್ ಆಗಿ ಮನೆಗೆ ವಾಪಸ್ ಆಗಿದ್ದರು.
ಪೊಲೀಸ್ ಸಹಾಯವಾಣಿಗೆ ಕರೆ ಮಾಡಿ ʼಚಿಕನ್ʼ ಸರಿಯಿಲ್ಲವೆಂದ ಭೂಪ…!
ಆದರೆ ಏಕಾಏಕಿ ಆರಂಭವಾದ ಹೊಟ್ಟೆನೋವು ಉಲ್ಭಣಗೊಂಡ ಪರಿಣಾಮ ಇಂದು ಮುಂಜಾನೆ ಕೊನೆಯುಸಿರೆಳೆದಿದ್ದಾರೆ. ಕೌಟುಂಬಿಕ ಕಲಹಕ್ಕೆ ಬೇಸತ್ತ ರಮ್ಯಾ ಆತ್ಮಹತ್ಯೆಗೆ ಯತ್ನಿಸಿದ್ದರು ಎನ್ನಲಾಗಿದೆ. ಗೋಣಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.