alex Certify SHOCKING NEWS: PU ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: PU ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ದಾವಣಗೆರೆ: ದ್ವಿತೀಯ ಪಿಯು ವಿದ್ಯಾರ್ಥಿ ಮಿಥುನ್ ಆತ್ಮಹತ್ಯೆ ಪ್ರಕರಣಕ್ಕೆ ಆಘಾತಕಾರಿ ತಿರುವು ಸಿಕ್ಕಿದ್ದು, ಭಯಾನಕ ಗೇಮ್ ವೀಕ್ಷಣೆ ಗೀಳಿನಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ಸಾವಿಗೂ ಮೊದಲು ಮಿಥುನ್, ಆತ್ಮಹತ್ಯೆಗೆ ಪ್ರಚೋದನೆ ನೀಡುವಂತಹ ಭಯಾನಕ ಗೇಮ್ ಗಳನ್ನು ಮೊಬೈಲ್ ನಲ್ಲಿ ವೀಕ್ಷಿಸಿದ್ದ. ಅಲ್ಲದೇ ದೇಹದ ವಿವಿಧೆಡೆ ಚಾಕುವಿನಿಂದ ಚುಚ್ಚಿಕೊಂಡಿದ್ದ. ಬಳಿಕ ತನ್ನ ಸಾವಿಗೆ ತಾನೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಕಟ್ಟಡದಿಂದ ಹಾರಿ ಆತ್ಮಹತ್ಯೆಗೆ ಶರಣಾಗಿದ್ದ.

ಏ.23ರಂದು ಮಿಥುನ್ ದಾವಣಗೆರೆ ನಗರದ ಅರುಣಾ ಸರ್ಕಲ್ ಬಳಿಯ ಪಿಸಾಳೆ ಕಾಂಪೌಂಡ್ ನಲ್ಲಿ ಎರಡನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ. ಮೊಬೈಲ್ ನಲ್ಲಿ ಭಯಾನಕ ಗೇಮ್ ವೀಕ್ಷಿಸುವ ಅತಿಯಾದ ಚಟವೇ ವಿದ್ಯಾರ್ಥಿಯನ್ನು ಬಲಿ ಪಡೆದಿರುವ ಸಾಧ್ಯತೆ ಇದೆ. ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಬಳಿಕ ಸ್ಪಷ್ಟ ಚಿತ್ರಣ ಹೊರಬರಲಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...