alex Certify SHOCKING : ಅಯ್ಯೋ ದೇವ್ರೇ : ‘ಸಾಕು ನಾಯಿ’ ಸತ್ತಿದ್ದಕ್ಕೆ ಬೇಸತ್ತು ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING : ಅಯ್ಯೋ ದೇವ್ರೇ : ‘ಸಾಕು ನಾಯಿ’ ಸತ್ತಿದ್ದಕ್ಕೆ ಬೇಸತ್ತು ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ.!

ಬೆಂಗಳೂರು : ಸಾಕು ನಾಯಿ ಸತ್ತಿದ್ದಕ್ಕೆ ಬೇಸತ್ತು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರು ಉತ್ತರ ತಾಲೂಕಿನ ಹೆಗ್ಗಡದೇವಪುರದಲ್ಲಿ ಘಟನೆ ನಡೆದಿದೆ. ವ್ಯಕ್ತಿಯೊಬ್ಬರು ನಾಯಿ ಚೈನ್ ನಿಂದ ನೇಣು ಬಿಗಿದುಕೊಂಡು ಸೂಸೈಡ್ ಮಾಡಿಕೊಂಡಿದ್ದಾರೆ.

ರಾಜಶೇಖರ್ ಎಂಬುವವರು ತಮ್ಮ ಮನೆಗೆ 9 ವರ್ಷದ ಹಿಂದೆ ಜರ್ಮನ್ ಶೆಫರ್ಡ್ ನಾಯಿ ತಂದಿದ್ದರು. ಅದಕ್ಕೆ ಬೌನ್ಸಿ ಎಂದು ನಾಮಕರಣ ಮಾಡಿದ್ದರು. ಆದರೆ ಅದು ಅನಾರೋಗ್ಯದಿಂದ ಸಾವನ್ನಪ್ಪಿದ್ದು, ಬೇಸತ್ತ ರಾಜಶೇಖರ್ ನಾಯಿ ಕಟ್ಟಿದ ಚೈನ್ ನಿಂದಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಮಾದಕನಾಯಕಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...