ರಾಯಚೂರು : ಪೇಂಟ್ ಗೆ ಬಳಸುವ ಥಿನ್ನರ್ ಕುಡಿದು 3 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ಜಿಲ್ಲೆಯ ಮಾನ್ವಿ ತಾಲೂಕಿನ ಹಿರೇಕೊಟ್ನೇಕಲ್ ಗ್ರಾಮದಲ್ಲಿ ನಡೆದಿದೆ.
ಮೃತ ಬಾಲಕನನ್ನು ಶಿವಾರ್ಜುನ ನಾಯಕ್ (3) ಎಂದು ಗುರುತಿಸಲಾಗಿದೆ. ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ಗ್ರಾಮದಲ್ಲಿ ಜಾತ್ರೆ ಮಹೋತ್ಸವ ಹಿನ್ನೆಲೆ ಮನೆಯಲ್ಲಿ ಪೇಂಟ್ ಮಾಡುವುದಕ್ಕಾಗಿ ಥಿನ್ನರ್ ತಂದಿಡಲಾಗಿತ್ತು, ಇದನ್ನು ಗಮನಿಸಿದ ಬಾಲಕ ಥಿನ್ನರ್ ಕುಡಿದಿದ್ದಾನೆ. ಅಸ್ವಸ್ಥಗೊಂಡಿದ್ದ ಬಾಲಕನನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಲಾಗಿತ್ತು, ಆದರೆ ಚಿಕಿತ್ಸೆ ಫಲಿಸದೇ ಬಾಲಕ ಮೃತಪಟ್ಟಿದ್ದಾನೆ. ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.