ಕಲಬುರಗಿ : ಅಣ್ಣ ತಂಗಿಯ ವರಸೆ ಪ್ರೀತಿಗೆ ಪೋಷಕರು ಒಪ್ಪಿಗೆ ಕೊಡದಿದ್ದಕ್ಕೆ ಮನನೊಂದು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿಯಲ್ಲಿ ನಡೆದಿದೆ.
ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಮಾಗಣಗೇರೆ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಶಶಿಕಲಾ (20) ಗೊಲ್ಲಾಳಪ್ಪ (24) ಎಂದು ಗುರುತಿಸಲಾಗಿದೆ. ಇಬ್ಬರು ಕೂಡ ವರಸೆಯಲ್ಲಿ ಅಣ್ಣ ತಂಗಿ, ಆದರೆ ಇಬ್ಬರ ನಡುವೆ ಪ್ರೀತಿ ಚಿಗುರೊಡೆದಿದೆ.
ಅಣ್ಣ-ತಂಗಿ ಪ್ರೀತಿಗೆ ಪೋಷಕರು ವಿರೋಧ ವ್ಯಕ್ತಪಡಿಸಿ ಸಿಂಧಗಿ ಗ್ರಾಮದ ಯುವಕನ ಜೊತೆ ಮದುವೆ ಫಿಕ್ಸ್ ಮಾಡಿದ್ದರು. ಈ ವಿಚಾರ ತಿಳಿದ ಗೊಲ್ಲಾಳಪ್ಪ ಯವತಿಯನ್ನು ಮನೆಯಿಂದ ಹೊರಗೆ ಕರೆದುಕೊಂಡು ಹೋಗಿದ್ದಾನೆ. ನಂತರ ದೇವಸ್ಥಾನದಲ್ಲಿ ಇಬ್ಬರು ಮದುವೆ ಆಗಿ ಅದೇ ಗ್ರಾಮದ ತೋಟದ ಜಮೀನೊಂದರಲ್ಲಿ ಇಬ್ಬರು ನೇಣಿಗೆ ಶರಣಾಗಿದ್ದಾರೆ. ಯಡ್ರಾಮಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.