ಬೆಂಗಳೂರು : ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, ಪತಿಯೋರ್ವ ಪತ್ನಿಯನ್ನು ಕೊಂದು ದೇಹ ಕತ್ತರಿಸಿ ಸೂಟ್ ಕೇಸ್ ಗೆ ತುಂಬಿದ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ.
ಬೆಂಗಳೂರಿನ ಹುಳಿಮಾವು ಸಮೀಪದ ದೊಡ್ಡಕನ್ನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಮಹಾರಾಷ್ಟ್ರ ಮೂಲದ ಪತಿ ಈ ಕೃತ್ಯ ಎಸಗಿದ್ದಾನೆ ಎಂದು ಹೇಳಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕೃತ್ಯ ಎಸಗಿ ಮಹಾರಾಷ್ಟ್ರದಲ್ಲಿರುವ ಪತ್ನಿ ಪೋಷಕರಿಗೆ ಕರೆ ಮಾಡಿ ಸುದ್ದಿ ತಿಳಿಸಿದ್ದಾನೆ. ದೊಡ್ಡಕನ್ನಹಳ್ಳಿಯಲ್ಲಿರುವ ಮನೆಗೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.