ಉತ್ತರ ಪ್ರದೇಶ : 19 ವರ್ಷದ ಯುವಕನೊಬ್ಬ ತನ್ನ 17 ವರ್ಷದ ಸಹೋದರಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಘಟನೆ ಉತ್ತರ ಪ್ರದೇಶದ ಕಾಸ್ಗಂಜ್ ಜಿಲ್ಲೆಯಲ್ಲಿ ನಡೆದಿದೆ.
ಫೆಬ್ರವರಿ 3 ರ ರಾತ್ರಿ ಈ ಘಟನೆ ನಡೆದಿದ್ದು, ಆರೋಪಿಯನ್ನು ಸಂಜು ಎಂದು ಗುರುತಿಸಲಾಗಿದೆ. ತನ್ನ ಮೊಬೈಲ್ ಫೋನ್ ನಲ್ಲಿ ಅಶ್ಲೀಲ ವೀಡಿಯೊವನ್ನು ವೀಕ್ಷಿಸಿ ತಂಗಿ ಮೇಲೆ ಅತ್ಯಾಚಾರ ಎಸಗಿದ್ದಾನೆ.
ಘಟನೆ ನಡೆದಾಗ ಸಹೋದರಿ ಮನೆಯಲ್ಲಿ ಒಬ್ಬರೇ ಇದ್ದರು, ಅವರ ತಾಯಿ ಸಂಬಂಧಿಕರನ್ನು ಭೇಟಿ ಮಾಡಲು ದೂರದ ಊರಿಗೆ ಹೋಗಿದ್ದರು . ಪೊಲೀಸರ ಪ್ರಕಾರ, ಸಂಜು ಅಶ್ಲೀಲ ವಿಡಿಯೋ ನೋಡಿದ ನಂತರ, ತನ್ನ ಪಕ್ಕದಲ್ಲಿ ಮಲಗಿದ್ದ ತನ್ನ ಸಹೋದರಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ತಾನು ಮಾಡಿದ್ದನ್ನು ಅವಳು ಯಾರಿಗಾದರೂ ಹೇಳಬಹುದೆಂಬ ಭಯದಿಂದ ತನ್ನ ಸಹೋದರಿಯನ್ನು ಕತ್ತು ಹಿಸುಕಿ ಕೊಂದು ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ.