ಮೊಬೈಲ್ ಬಳಸಬೇಡಿ ಎಂದಿದ್ದಕ್ಕೆ ವಿದ್ಯಾರ್ಥಿಯೋರ್ವ ಶಿಕ್ಷಕನ ಕತ್ತು ಕೊಯ್ದ ಭಯಾನಕ ಘಟನೆ ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯ ಮಿಹಿನ್ ಪುರವಾದಲ್ಲಿರುವ ನವಯುಗ್ ಇಂಟರ್ ಕಾಲೇಜಿನಲ್ಲಿ ನಡೆದಿದೆ.
11 ನೇ ತರಗತಿಯ ವಿದ್ಯಾರ್ಥಿ ತರಗತಿಯಲ್ಲಿ ತನ್ನ ಮೊಬೈಲ್ ಫೋನ್ ಜಪ್ತಿ ಮಾಡಿದ್ದಕ್ಕಾಗಿ ತನ್ನ ಇಂಗ್ಲಿಷ್ ಶಿಕ್ಷಕರಿಗೆ ಚಾಕುವಿನಿಂದ ಇರಿದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಶಿಕ್ಷಕ ರಾಜೇಂದ್ರ ಪ್ರಸಾದ್ಗೆ ಗಂಭೀರ ಗಾಯಗಳಾಗಿದ್ದು, ಜಿಲ್ಲಾ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಸಹಾಯಕ ಪೊಲೀಸ್ ಅಧೀಕ್ಷಕ(ಎಎಸ್ಪಿ-ನಗರ) ರಮಾನಂದ್ ಪ್ರಸಾದ್ ಕುಶ್ವಾಹ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ, ಮೂರು ದಿನಗಳ ಹಿಂದೆ, ಕ್ಯಾಂಪಸ್ನಲ್ಲಿ ಸೆಲ್ ಫೋನ್ ಬಳಸುವುದನ್ನು ನಿಷೇಧಿಸಿರುವುದರಿಂದ ಶಿಕ್ಷಕರು ಹಲವಾರು ವಿದ್ಯಾರ್ಥಿಗಳ ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಂಡರು. ಈ ನಡೆಯಿಂದ ಕೋಪಗೊಂಡ ಹುಡುಗನೊಬ್ಬ ಶಿಕ್ಷಕನ ಮೇಲೆ ಹಲ್ಲೆ ನಡೆಸಿದ್ದಾನೆ. ಅವರು ಗುರುವಾರ ಹಾಜರಾತಿ ತೆಗೆದುಕೊಳ್ಳುವಾಗ ಚಾಕುವಿನಿಂದ ಇರಿದಿದ್ದಾನೆ ಎಂದು ತಿಳಿಸಿದ್ದಾರೆ.
ಶಿಕ್ಷಕನ ಕುಟುಂಬಸ್ಥರು ನೀಡಿದ ದೂರಿನ ಆಧಾರದ ಮೇಲೆ ಆರೋಪಿ ವಿದ್ಯಾರ್ಥಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಅಪರಾಧಕ್ಕೆ ಬಳಸಿದ್ದ ಚಾಕುವನ್ನು ವಶಪಡಿಸಿಕೊಳ್ಳಲಾಗಿದೆ.
बहराइच: मोबाइल चलाने से टीचर ने रोका तो 11वीं के छात्र ने चाकू से कर दिया हमला
◆ टीचर को इलाज के लिए स्वास्थ्य केंद्र में भर्ती कराया गया#Bahraich | #UttarPradesh | Bahraich pic.twitter.com/anQkZ4seGT
— News24 (@news24tvchannel) December 13, 2024