ನವದೆಹಲಿ: ಟೊರೊಂಟೊದ ಪಿಯರ್ಸನ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಡೆಲ್ಟಾ ಏರ್ ಲೈನ್ಸ್ ವಿಮಾನವು ತಲೆಕೆಳಗಾಗಿ ಉರುಳಿ ಬಿದ್ದಿದ್ದು, 19 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ವಿಮಾನ ಅಪಘಾತದ ಮತ್ತೊಂದು ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
76 ಪ್ರಯಾಣಿಕರು ಮತ್ತು ನಾಲ್ವರು ಸಿಬ್ಬಂದಿಯನ್ನು ಹೊತ್ತ ಡೆಲ್ಟಾ ಏರ್ಲೈನ್ಸ್ ವಿಮಾನವು ಟೊರೊಂಟೊದ ಪಿಯರ್ಸನ್ ವಿಮಾನ ನಿಲ್ದಾಣದಲ್ಲಿ ಇಳಿಯುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.
ಅದೃಷ್ಟವಶಾತ್ ಎಲ್ಲಾ ಪ್ರಯಾಣಿಕರು ಬದುಕುಳಿದಿದ್ದಾರೆ, ಆದರೆ 18 ಜನರನ್ನು ಸಣ್ಣಪುಟ್ಟ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.
Painful to watch — clearest view of Delta crashing, bursting into flames and flipping into a dark black cloud https://t.co/GC9AQUL2uv pic.twitter.com/fTmMPGHFQD
— RT (@RT_com) February 18, 2025