ರಾಯಚೂರು : ಕುಡಿಬೇಡ ಎಂದು ತಂದೆ ಬುದ್ದಿವಾದ ಹೇಳಿದ್ದಕ್ಕೆ ಮಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ನಡೆದಿದೆ.
ಆದರ್ಶ್ (24) ಎಂಬ ಯುವಕ ದುಡುಕಿನ ನಿರ್ಧಾರ ಕೈಗೊಂಡಿದ್ದು, ಕುಡಿದು ಹಣ ಹಾಳು ಮಾಡಬೇಡಡ ಎಂದು ಪೋಷಕರು ಬುದ್ದಿವಾದ ಹೇಳಿದ್ದಕ್ಕೆ ಮಗ ಆತ್ಮಹತ್ಯೆ ಮಾಡಿಕೊಂಡಿ ದ್ದಾನೆ.ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮಗನನ್ನು ಕಳೆದುಕೊಂಡ ಹೆತ್ತವರ ಆಕ್ರಂದನ ಮುಗಿಲು ಮುಟ್ಟಿದೆ.