ಅರಾಹ್ (ಬಿಹಾರ) : ಬಿಹಾರದ ಅರಾ ರೈಲ್ವೆ ನಿಲ್ದಾಣದ ಮೇಲ್ಸೇತುವೆಯಲ್ಲಿ ಮಂಗಳವಾರ ಸಂಜೆ ನಡೆದ ಭೀಕರ ಗುಂಡಿನ ದಾಳಿಯಲ್ಲಿ 16 ವರ್ಷದ ಬಾಲಕಿ, ಆಕೆಯ ತಂದೆ ಮತ್ತು ಬಂದೂಕುಧಾರಿ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಬಾಲಕಿ, ಆಕೆಯ ತಂದೆಯನ್ನು ಗುಂಡಿಕ್ಕಿ ಕೊಂದು ತಾನೂ (ಪ್ರೇಮಿ) ಕೂಡ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪ್ರೀತಿಗೆ ನಿರಾಕರಿಸಿದ್ದಕ್ಕೆ ಈ ಕೊಲೆ ನಡೆದಿರಬಹುದೆಂದು ಶಂಕಿಸಲಾಗಿದೆ.
ವರದಿಗಳ ಪ್ರಕಾರ, ಪ್ಲಾಟ್ಫಾರ್ಮ್ 2 ಮತ್ತು 3 ಅನ್ನು ಸಂಪರ್ಕಿಸುವ ಪಾದಚಾರಿ ಸೇತುವೆಯಲ್ಲಿ ಗುಂಡಿನ ದಾಳಿ ನಡೆದಿದೆ. ದಾಳಿಕೋರನನ್ನು 24 ವರ್ಷದ ಅಮನ್ ಕುಮಾರ್ ಎಂದು ಗುರುತಿಸಲಾಗಿದ್ದು, ಮೊದಲು ಹದಿಹರೆಯದ ಬಾಲಕಿ ಜಿಯಾ ಕುಮಾರಿ ಮತ್ತು ಆಕೆಯ ತಂದೆ ಅನಿಲ್ ಸಿನ್ಹಾ ಅವರ ಮೇಲೆ ಗುಂಡು ಹಾರಿಸಿದ್ದಾನೆ. ಮೂವರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ದಾಳಿಯ ಹಿಂದಿನ ಉದ್ದೇಶದ ಬಗ್ಗೆ ಸ್ಥಳೀಯ ಪೊಲೀಸರು ಇನ್ನೂ ತನಿಖೆ ನಡೆಸುತ್ತಿದ್ದಾರೆ. ಘಟನಾ ಸ್ಥಳವನ್ನು ಪರಿಶೀಲಿಸಲು ಮತ್ತು ಪುರಾವೆಗಳನ್ನು ಸಂಗ್ರಹಿಸಲು ವಿಧಿವಿಜ್ಞಾನ ತಜ್ಞರನ್ನು ನಿಯೋಜಿಸಲಾಗಿದೆ ಎಂದು ಭೋಜ್ಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಜ್ ಹೇಳಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಶಂಕಿತನು ಗುಂಡು ಹಾರಿಸಿ ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಬಾಲಕಿ ಮತ್ತು ಅವಳ ತಂದೆಯನ್ನು ಗುರಿಯಾಗಿಸಿಕೊಂಡಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ವರದಿ ಮಾಡಿದ್ದಾರೆ.
A 20-year-old youth shoots dead a girl and her father before killing himself at Ara railway station in Bihar. The girl was about to catch a train to go to Delhi. #Bihar #Crime #Ara #Railways #crimewatch pic.twitter.com/YY2CEGRxCX
— Dev Raj (@JournoDevRaj) March 25, 2025
Shocking News Coming From #Bihar: Triple murder at Ara railway station Young man shot dead father and daughter, then he shot himself.#Arrah, Bihar, where a 23-24-year-old man shot dead a 16-17-year-old girl and her father before taking his own life. pic.twitter.com/fjfcHbov3B
— Siraj Noorani (@sirajnoorani) March 26, 2025