
ಚೆನ್ನೈ: ತಮಿಳುನಾಡಿನ ನೀಲಗಿರಿ ಪ್ರದೇಶದ ಮಾಸಿನಗುಡಿಯಲ್ಲಿ ಕಾಡಾನೆಗೆ ಬೆಂಕಿಹಚ್ಚಿ ಹತ್ಯೆ ಮಾಡಲಾಗಿದೆ. ಆಹಾರ ಅರಸಿಕೊಂಡು ಕಾಡಾನೆ ಊರಿಗೆ ಪ್ರವೇಶಿಸಿದ್ದು, ಆನೆ ಓಡಿಸಲು ಬೆಂಕಿ ಹಚ್ಚಿದ ಕಿಡಿಗೇಡಿಗಳು ಆನೆಯ ಮೇಲೆಯೇ ಎಸೆದಿದ್ದಾರೆ.
ಬೆಂಕಿ ತಗುಲಿ ಆನೆ ಪಾರಾಗಲು ನಡೆಸಿದ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿವೆ. ತೀವ್ರ ಸುಟ್ಟ ಗಾಯಗಳಾಗಿದ್ದ ಆನೆಯನ್ನು ವೈದ್ಯಕೀಯ ಚಿಕಿತ್ಸೆಗಾಗಿ ಶಿಬಿರಕ್ಕೆ ಸಾಗಿಸುವಾಗ ಮೃತಪಟ್ಟಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಮಾಸಿನಗುಡಿ ಟೈಗರ್ ರಿಸರ್ವ್ ಫಾರೆಸ್ಟ್ ಅಧಿಕಾರಿ ಈ ಬಗ್ಗೆ ಮಾಹಿತಿ ನೀಡಿದ್ದು, ಪ್ರಶಾಂತ್, ರೇಮಂಡ್ ಡೀನ್, ರಿಕಿ ರಾಯನ್ ಅವರ ವಿರುದ್ಧ ಪ್ರಕರಣ ದಾಖಲಿಸಿ, ಇಬ್ಬರನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.