ಬೆಂಗಳೂರು : ಮಲಗಿದ್ದಲ್ಲೇ ಹೃದಯಾಘಾತದಿಂದ ಗ್ರಾಮ ಲೆಕ್ಕಿಗ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಲಕ್ಕೂರು ಗ್ರಾಮದಲ್ಲಿ ಗ್ರಾಮ ಲೆಕ್ಕಿಗನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಾಧವ್ ರಾವ್ (53) ತಮ್ಮ ಮನೆಯಲ್ಲಿ ಮೃತಪಟ್ಟಿದ್ದಾರೆ.
ಇತ್ತೀಚೆಗಂತೂ ಹೃದಯಾಘಾತದ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಆತಂಕ ಮನೆ ಮಾಡಿದೆ. ಮಕ್ಕಳು, ಯುವಕರು, ಮಹಿಳೆಯರು, ವೃದ್ದರೂ ಹೆಚ್ಚಾಗಿ ಹೃದಯಾಘಾತಕ್ಕೆ ಬಲಿಯಾಗುತ್ತಿದ್ದು, ಕಳವಳ ಮೂಡಿಸಿದೆ.