alex Certify SHOCKING : ನಾಯಿಯಿಂದ ತಪ್ಪಿಸಿಕೊಳ್ಳಲು 3ನೇ ಮಹಡಿಯಿಂದ ಜಿಗಿದು ಯುವಕ ಸಾವು : ವಿಡಿಯೋ ವೈರಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING : ನಾಯಿಯಿಂದ ತಪ್ಪಿಸಿಕೊಳ್ಳಲು 3ನೇ ಮಹಡಿಯಿಂದ ಜಿಗಿದು ಯುವಕ ಸಾವು : ವಿಡಿಯೋ ವೈರಲ್

ನಾಯಿಯಿಂದ ತಪ್ಪಿಸಿಕೊಳ್ಳಲು 3ನೇ ಮಹಡಿಯಿಂದ ಜಿಗಿದು ಯುವಕ ಸಾವನ್ನಪ್ಪಿದ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಘಟನೆಯ ವಿಡಿಯೋ ವೈರಲ್ ಆಗಿದೆ.

ಯುವಕನೊಬ್ಬ ಹೋಟೆಲ್ ನ ಮೂರನೇ ಮಹಡಿಯಿಂದ ಜಿಗಿದು ಸಾವನ್ನಪ್ಪಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.

ಸೈಬರಾಬಾದ್ ಪೊಲೀಸ್ ಕಮಿಷನರೇಟ್ನ ಚಂದನಗರ ಪೊಲೀಸ್ ಠಾಣೆ ವ್ಯಾಪ್ತಿಯ ವಿವಿ ಪ್ರೈಡ್ ಕ್ಲಾಸಿಕ್ ಹೋಟೆಲ್ನಲ್ಲಿ ಭಾನುವಾರ ತಡರಾತ್ರಿ ಈ ಘಟನೆ ನಡೆದಿದ್ದು, 24 ಗಂಟೆಗಳ ನಂತರ ಬೆಳಕಿಗೆ ಬಂದಿದೆ.
ನೆರೆಯ ಆಂಧ್ರಪ್ರದೇಶದ ತೆನಾಲಿ ಮೂಲದ 23 ವರ್ಷದ ಉದಯ್ ತನ್ನ ಸ್ನೇಹಿತರೊಂದಿಗೆ ರಾಮಚಂದ್ರಪುರಂನ ಅಶೋಕ್ ನಗರ ಪ್ರದೇಶದಲ್ಲಿರುವ ಹೋಟೆಲ್ ಗೆ ತೆರಳಿದ್ದರು. ಅವರು ಹೋಟೆಲ್ ನ ಮೂರನೇ ಮಹಡಿಗೆ ಹೋದಾಗ, ಕಾರಿಡಾರ್ ನಲ್ಲಿ ನಾಯಿಯೊಂದು ಅವರ ಮೇಲೆ ದಾಳಿ ಮಾಡುತ್ತಿರುವುದನ್ನು ಕಂಡರು. ಯುವಕ ಭಯಭೀತನಾಗಿ ನಾಯಿಯಿಂದ ತಪ್ಪಿಸಿಕೊಳ್ಳಲು ಕಿಟಕಿಯ ಮೂಲಕ ಜಿಗಿದು ಮೃತಪಟ್ಟಿದ್ದಾನೆ ಎನ್ನಲಾಗಿದೆ. ಘಟನೆಯ ವಿಡಿಯೋ ವೈರಲ್ ಆಗಿದೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...